ಕೊರೊನಾಗಿಂತ ಭಯಾನಕ ವೈರಸ್ ಮಂಗಳೂರು ಪೊಲೀಸರು – ಪೋಸ್ಟ್ ವಿಕೃತಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದೇಶಾದ್ಯಂತ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವೈದ್ಯರು, ಪೊಲೀಸರು, ನರ್ಸ್ ಗಳು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕಿಡಿಗೇಡಿಗಳು ಮಂಗಳೂರಿನಲ್ಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ವಿಕೃತಿ ಮೆರೆದಿದ್ದಾರೆ.

ಮೈಕಲ್ತೋ ಬಿಸಯಾ ಎನ್ನುವ ಫೇಸ್‍ಬುಕ್ ಖಾತೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷಾ ಅವರ ಫೋಟೋ ಬಳಸಿ, ”ಕೊರೊನಾಗಿಂತಲೂ ಭಯಾನಕ ವೈರಸ್ ಮಂಗಳೂರು ಪೊಲೀಸರು. ಭಾರೀ ಸುದ್ದಿ ಮಾಡುತ್ತಿರುವ ಪೋಲೀ__ ವೈರಸ್” ಎಂದು ಪೋಸ್ಟ್ ಮಾಡಲಾಗಿದೆ.

ಪೊಲೀಸರ ಬಗ್ಗೆ ಕೀಳು ಮಟ್ಟದ ಪೋಸ್ಟ್ ಮಾಡಿರುವ ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಈ ಕುರಿತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button