ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ತನಗೆ ಕೊರೊನಾ ಸೋಂಕು ತಗುಲಿದೆ ಎಂಬ ಆತಂಕಕ್ಕೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಬ್ಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ(56) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಸದಾಶಿವ ಅವರು ತನಗೆ ಕೊರೊನಾ ತಗಲಿದೆ ಎಂದು ಶಂಕಿಸಿ ಭಯಗೊಂಡಿದ್ದರು. ತನ್ನಿಂದ ಮನೆಯವರಿಗೂ ಈ ಸೋಂಕು ಹರಡಬಹುದೆಂಬ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಇದೇ ಕಾರಣಕ್ಕೆ ಸದಾಶಿವ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮನೆಯವರ ಬಳಿ ಸದಾಶಿವ ಅವರು ಹೇಳಿಕೊಂಡಿದ್ದರು ಎಂದು ಪತ್ನಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ