ಸಾಂಸ್ಕೃತಿಕ ನಗರಿಗೂ ಕಾಲಿಟ್ಟ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ: ಮೈಸೂರು: ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 5 ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್​ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಬೆಳಿಗ್ಗೆ ರಾಜ್ಯದಲ್ಲಿ ಮತ್ತೆ ನಾಲ್ಕು ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬೆಂಗಳೂರಿನ ಮೂವರು, ಚಿಕ್ಕಬಳ್ಳಾಪುರದ ಓರ್ವ ಹಾಗೂ ಇದೀಗ ಮೈಸೂರಿನಲ್ಲಿ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button