ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಹಾಮಾರಿ ಕೊರೊನಾ ವೈರಸ್ ಕರ್ನಾಟಕದಲ್ಲಿ ಮೂರನೇ ಹಂತ ತಲುಪಿದೆಯೇ ಎಂಬ ಅನುಮಾನ ಆರಂಭವಾಗಿದೆ. ಕಾರಣ ಮೈಸೂರಿನ ವ್ಯಕ್ತಿಯೋರ್ವರಲ್ಲಿ ಕಾಣಿಸಿಕೊಂಡಿರುವ ಸೋಂಕು ಈ ಅನುಮಾನಕ್ಕೆ ಕಾರಣವಾಗಿದೆ.
ಮೈಸೂರಿನ 35 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರು ವಿದೇಶದಿಂದ ಬಂದವರ ಜಾತೆಯಾಗಲೀ ಅಥವಾ ಯಾವುದೇ ಸೋಂಕಿತರ ಜತೆಯಾಗಲಿ ಸಂಪರ್ಕ ಹೊಂದಿಲ್ಲ. ಅದಾಗ್ಯೂ ಇವರಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಕೊರೊನಾ ಮೂರನೇ ಹಂತಕ್ಕೆ ತಪಿದೆಯೇ ಎಂಬ ಆತಂಕ ಎದುರಾಗಿದೆ.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ನಡುವೆ ಮಣಿಪಾಲದ ಕೆಎಂಸಿ ಆಸ್ಪತ್ರೆ ಇಂದಿನಿಂದ ಏಪ್ರಿಲ್ 15 ರವರೆಗೆ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಸೇವೆ ಮಾತ್ರ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಗೆ ಕೆಎಂಸಿಯಲ್ಲಿ ಚಿಕಿತ್ಸೆ ಸಿಗುತ್ತಿರುವುದರಿಂದ ಒಪಿಡಿ ರೋಗಿಗಳಿಗೆ ಯಾವುದೇ ಸಮಸ್ಯೆಗಳು ಆಗಬಾರದು ಎನ್ನುವ ಉದ್ದೇಶದಿಂದ ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ