ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೋನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾಂಸ್ಕ್ರುತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ.
ಸರ್ಕಾರ ರಾಜ್ಯಾದ್ಯಂತ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಒಂದೇ ದಿನ 6 ಹೊಸ ಪ್ರಕರಣ ದಾಖಲಾಗಿದ್ದವು. ಇಂದೂ ಕೂಡ ರಾಜ್ಯದಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಮೈಸೂರಿನಲ್ಲಿ 46 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ 17, ಕಲ್ಬುರ್ಗಿ 3, ಕೊಡಗು 1, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 1, ಉತ್ತರ ಕನ್ನಡ 1 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಕೊರೋನಾ ಸೋಂಕಿತ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ