ಮೈಸೂರಿನಲ್ಲಿ 12ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 12 ಜನರಲ್ಲಿ ಸೊಂಕು ಕಾಣಿಸಿಕೊಂಡಿದೆ.

ನಂಜನಗೂಡಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ನಂಜನಗೂಡಿನ ಕಾರ್ಖಾನೆಯ ಸಾವಿರದಷ್ಟು ಕಾರ್ಮಿಕರಿಗೂ ಕೊರೊನಾ ಇರುವ ಶಂಕೆ ವ್ಯಕ್ತವಾಗುತ್ತಿದ್ದು, ಕಾರ್ಖಾನೆಯಲ್ಲಿರುವ ಮಂಡ್ಯ ಮೂಲದ 30 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲು ನಿರ್ಧಾರ ಮಾಡಲಾಗಿದೆ.

ಮಂಡ್ಯ ವಿಳಾಸದಲ್ಲಿರುವ 20 ಮಂದಿಗೆ ಆಸ್ಪತ್ರೆಗಳಲ್ಲಿ ಹಾಗೂ ಮೈಸೂರು ವಿಳಾಸದಲ್ಲಿರುವ ಉಳಿದ 10 ಮಂದಿಗೆ ಮೈಸೂರಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕ್ವಾರಂಟೈನ್ ಮಾಡಲು ನಿರ್ಧಾರ ಮಾಡಲಾಗಿದೆ.

ಈ ಕುರಿತು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದು, ನಂಜನಗೂಡಿನ ಜುಬಿಲೆಂಟ್ಸ್ ಕಾರ್ಖಾನೆಯಲ್ಲಿ ಮೊದಲಿಗೆ ಒಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಮೂರರಿಂದ ಐದು ಆಯ್ತು. ಒಟ್ಟಾರೆ ಜಿಲ್ಲೆಯಲ್ಲಿ ಎಂಟು ಜನ ಸೋಂಕಿತರು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಇದೀಗ ಮತ್ತೆ ನಾಲ್ಕು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button