Latest

ಕೊರೊನಾ ಸೋಂಕು ಹೆಚ್ಚಳ; ಮಾರ್ಚ್ 15ರಿಂದ ಲಾಕ್ ಡೌನ್ ಜಾರಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ನಾಗ್ಪುರದಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡುತ್ತಿದೆ.

ಕಳೆದ 24ಗಂಟೆಯಲ್ಲಿ ನಾಗ್ಪುರದಲ್ಲಿ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಮಾರ್ಚ್ 15ರಿಂದ 21ರವರೆಗೆ ಲಾಕ್ ಡೌನ್ ಜಾರಿ ಮಾಡಿದೆ.

ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 13 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಮಹಾನಗರಿಯಲ್ಲಿಯೂ ಲಾಕ್ ಡೌನ್ ಜಾರಿ ಬಗ್ಗೆ ಚಿಂತನೆ ನಡೆಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button