ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಪಾದರಾಯನಪುರ ನಿವಾಸಿ 34 ವರ್ಷದ ಕೊರೊನಾ ಸೋಂಕಿತ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಹುಟ್ಟಿದ ತಕ್ಷಣ ಮಗುವನ್ನು ವೈದ್ಯರು ತಾಯಿಯಿಂದ ಬೇರೆ ಮಾಡಿದ್ದಾರೆ. ಇದೀಗ ಒಂದು ದಿನದ ಮಗುವಿಗೂ ಕೋವಿಡ್ ಟೆಸ್ಟ್ ಮಾಡುತ್ತಿದ್ದು, ಮಗುವಿನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಮಗುವನ್ನ ಐಸೂಲೇಷನ್ ವಾರ್ಡಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ತಾಯಿಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡಿನಲ್ಲಿ ಇರಿಸಲಾಗಿದೆ. ಈ ಮೂಲಕ ಕೊರೊನಾ ಮಹಾ ಮಾರಿಯಿಂದ ತಾಯಿ, ಮಗು ದೂರ ದೂರವಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ