
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಕೊರೋನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಾಳೆ ಮಾ.22ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಮತ್ತೊಮ್ಮೆ ನೆನಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಭಯ ಬಿಡಿ, ಮುನ್ನೆಚ್ಚರಿಕೆ ಮರೆಯದಿರಿ. ನೀವು ಮನೆಯಲ್ಲಿ ಇರುವುದಷ್ಟೇ ಮುಖ್ಯವಲ್ಲ, ನೀವು ಇರುವ ನಗರ, ಪಟ್ಟಣದಲ್ಲಿಯೇ ಉಳಿಯಿರಿ. ಅನಗತ್ಯ ಪ್ರಯಾಣ ನಿಮಗಾಗಲಿ ಅಥವಾ ಇತರಿಗಾಗಲಿ ಯಾವುದೇ ಉಪಯೋಗಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ನಾಳೆ ಒಂದು ದಿನ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಜನರು ಮನೆಯಲ್ಲಿ ಉಳಿಯಬೇಕು ಎಂದು ಸೂಚನೆ ನೀಡಿದ್ದಾರೆ. ಪ್ರಧಾನಿ ಕರೆಗೆ ದೇಶಾದ್ಯಂತ ಜನರು ಸ್ಪಂದಿಸಿದ್ದು, ಮನೆಯಲ್ಲಿ ಉಳಿಯಲು ನಿರ್ಧರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ