Latest

ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ; ತಾಯಿ-ಮಗು ಸುರಕ್ಷಿತ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಡೆಲಿವರಿ ಮಾಡಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಧ್ಯ ತಾಯಿ-ಮಗು ಇಬ್ಬರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಡಿಹೆಚ್‍ಓ ವೆಂಕಟೇಶ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿತ್ತು. ಹೀಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞರು ಹಾಗೂ ಸ್ತ್ರಿರೋಗ ತಜ್ಞರು ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲೆ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಿದರು.

ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಸೋಂಕಿತ ಮಹಿಳೆಗೆ ಜನಿಸಿರುವ ಮಗು 2.7 ಕೆ.ಜಿ ತೂಕವಿದೆ ಎಂದು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ COVID19 ಸೋಂಕಿತ ಮಹಿಳೆ ಒಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಮ್ಮ ಇಲಾಖೆಯ ವೈದ್ಯರು ಸಿ ಸೆಕ್ಷನ್ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮತ್ತು ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಮಾಹಿತಿ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button