9 ತಿಂಗಳ ತುಂಬು ಗರ್ಭಿಣಿಗೂ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯನ ತುಂಬು ಗರ್ಭಿಣಿ ಪತ್ನಿಗೂ ಕೊರೊನಾ ಸೋಂಕು ಧೃಡಪಟ್ಟಿದೆ.

ಏಮ್ಸ್ ಆಸ್ಪತ್ರೆಯ ವೈದ್ಯನಿಗೆ ಕೊರೊನಾ ಸೋಂಕು ಕಂಡು ಬಂದಿತ್ತು. ಇದೀಗ ಅವರ ಪತ್ನಿ 9 ತಿಂಗಳ ತುಂಬು ಗರ್ಭಿಣಿಗೆ ಕೊರೊನಾ ಪಾಸಿಟಿವ್ ಬಂದಿದೆ. ಗರ್ಭಿಣಿಯನ್ನು ಎಮರ್ಜೆನ್ಸಿ ವಾರ್ಡಿನಲ್ಲಿ ಐಸೋಲೇಷನ್ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಎರಡು ಮೂರು ದಿನಗಳಲ್ಲಿ ಹೆರಿಗೆ ಆಗುವ ಸಾಧ್ಯತೆ ಇದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲಿ ಕೊರೊನಾ ಸೋಂಕು ತಗುಲುತ್ತಿದ್ದು, ಇತ್ತೀಚೆಗೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕೊರೊನಾ ಇರುವುದು ಸ್ಪಷ್ಟವಾಗಿತ್ತು. ದೆಹಲಿ ಮೊಹಲ್ಲಾ ಕ್ಲೀನಿಕ್ ವೈದ್ಯನಿಗೆ ಕೊರೊನಾ ಪಾಸಿಟಿವ್ ಆಗಿತ್ತು.

 

Home add -Advt

Related Articles

Back to top button