ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ಇದೀಗ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೀನ್ ಅವಧಿಯನ್ನು ಹೆಚ್ಚಿಸಿದೆ.
ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ದೆಹಲಿ ಸೇರಿದಂತೆ ಹೊರ ರಾಜ್ಯಗಳಿಂದ ಬರುವವರಿಗೆ ಮತ್ತೆ 14 ದಿನಗಳಿಗೆ ಕ್ವಾರಂಟೀನ್ ಅವಧಿ ಕಡ್ಡಾಯಗೊಳಿಸಿದೆ. 7 ದಿನ ಸಾಂಸ್ಥಿಕ ಕ್ವಾರಂಟೀನ್ ಮತ್ತು 7 ದಿನ ಹೋಂ ಕ್ವಾರಂಟೀನ್ ಗೆ ಒಳಪಡಿಸಲು ಸಿದ್ಧತೆ ನಡೆಸಲಾಗಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಅದರಲ್ಲೂ ಕೊರೊನಾ ವಾರಿಯರ್ಸ್ ಗಳಿಗೆ ಸೋಂಕು ಹೆಚ್ಚುತ್ತಿರುವುದರಿಂದ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಆರಂಭವಾಗಿದೆ. ಸಭೆಯಲ್ಲಿ ಸೋಂಕಿತರು ಹೆಚ್ಚಾಗಿ ಕಂಡು ಬರುತ್ತಿರುವ ಪ್ರದೇಶಗಳನ್ನು ಮ್ಮತ್ತೆ ಸೀಲ್ ಡೌನ್ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ