Latest

ಜುಲೈ, ಆಗಸ್ಟ್ ನಲ್ಲಿ ಇನ್ನಷ್ಟು ಹೆಚ್ಚಲಿದೆ ಮಹಾಮಾರಿ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ವೈದ್ಯಕೀಯ ಸಿಬ್ಬಂದಿಗಳು ಇನ್ನೂ 6 ತಿಂಗಳ ಕಾಲ ಇದೇ ರೀತಿ ಸೇವೆ ಸಲ್ಲಿಸಲು ಮಾನಸಿಕವಾಗಿ ಸಿದ್ಧರಾಗಿ ಎಂದು ಕಂದಾಯ ಸಚಿವ, ಬೆಂಗಳೂರು ಕೊವಿಡ್ ನಿಯಂತ್ರಣ ಉಸ್ತುವಾರಿ ಆರ್ ಅಶೋಕ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಕೊರೊನಾ ಸೋಂಕು ಪ್ರಪಂಚದಾದ್ಯಂತ ಹೆಚ್ಚಳ ವಾಗಲಿದೆ ಎಂದು ವರದಿ ಬಂದಿದೆ. ಹೀಗಾಗಿ ನಮ್ಮದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೂಡ ಸೋಂಕು ಹೆಚ್ಚುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಆ ನಿಟ್ಟಿನಲ್ಲಿ ಇನ್ನೂ 6 ತಿಂಗಳ ಕಾಲ ಇದೇ ರೀತಿ ಕೆಲಸಗಳನ್ನು ಮುಂದುವರೆಸಲು ಮಾನಸಿಕವಾಗಿ ಸಿದ್ಧರಾಗಿ ಎಂದು ವೈದ್ಯರಿಗೆ ಸಂದೇಶ ರವಾನಿಸಿದರು.

ವಾರದ ಒಳಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಿಸಲು ವ್ಯವಸ್ಥೆ ಮಾಡಲಾಗುವುದು. ಈಗಾಗಲೇ 85 ವೈದ್ಯರ ನೇಮಕಕ್ಕೆ ಸೂಚಿಸಲಾಗಿದೆ. ಕೊವಿಡ್ ಟೆಸ್ಟ್ ಸೆಂಟರ್ ಗಳು, ವೈದ್ಯಕೀಯ ಸಿಬ್ಬಂದಿಗಳು ಸೋಂಕಿತ ರೋಗಿಯ ವರದಿ ಬಗ್ಗೆ ವ್ಯಕ್ತಿಯ ಜತೆ ನೇರವಾಗಿ ಕರೆ ಮಾಡಿ ತಿಳಿಸುವಂತಿಲ್ಲ. ವರದಿ ಬಂದ ಬಳಿಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಸರ್ಕಾರದ ವತಿಯಿಂದಲೇ ಸೋಂಕಿತರನ್ನು ಆಸ್ಪತ್ರೆಗೆ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಕೋವಿಡ್ ಕೇರ್ ಆಸ್ಪತ್ರೆಗಳ ಉಸ್ತುವಾರಿಗಾಗಿ ತಹಶೀಲ್ದಾರ್ ಮಾಡಲಾಗುವುದುಗಳ ನೇಮಕ. ಆಸ್ಪತ್ರೆಗಳಲ್ಲಿ ಕೆಲಸಮಾಡುವವರು ಭಯಭೀತರಾಗಿದ್ದಾರೆ. ಹೀಗಾಗಿ ಅವರ ವೇತನ ಹೆಚ್ಚಳ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಸಭೆ ನಡೆಸಿ ನಿರ್ಧರಿಸಲಾಗುವುದು. ಸೋಂಕಿತರಿಗೆ ಗುಣಮಟ್ಟದ ಊಟ ನೀಡಲು ಈಗಾಗಲೇ ಸೂಚಿಸಲಾಗಿದೆ. ಈ ಬಗ್ಗೆ ಇಸ್ಕಾನ್ ಜತೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದಲ್ಲಿ ದಂಡ ವಸೂಲಿ ಮಾಡುವ ಅಧಿಕಾರ ಪೊಲೀಸರಿಗೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ 742 ಕೋಟಿ ಅನುದಾನ ಬಂದಿದೆ. ಕರ್ನಾಟಕ ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ 250 ಕೋಟಿ, ಆರೋಗ್ಯ ಇಲಾಖೆಗೆ 70 ಕೋಟಿ, ಬಿಬಿಎಂಪಿಗೆ 50 ಕೋಟಿ ರೂ ಬಿಡುಗಡೆ, ಬಿಎಂಟಿಸಿಗೆ 2.89 ಕೋಟಿ ರೂ, ಗೃಹ ಇಲಾಖೆಗೆ 12 ಕೋಟಿ, ರೈಲ್ವೆ ಇಲಾಖೆ 13 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button