Kannada NewsKarnataka NewsLatest

*ಸಂಸದ ಡಿ.ಕೆ.ಸುರೇಶ್ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ*

ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರಗೊಂಡ ಪ್ರತಿಭಟನೆ

Related Articles
Home add -Advt


ಪ್ರಗತಿವಾಹಿನಿ ಸುದ್ದಿ: ಸಂಸದ ಡಿ.ಕೆ ಸುರೇಶ್ ಆಪ್ತರಾದ ಕೋಣನಕುಂಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಹಾಗೂ ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಡಿ.ಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮೇಲೆ ನಿರಂತರ ಐಟಿ ದಾಳಿ ನಡೆಸಲಾಗಿದೆ ಎಂದು ಕಿಡಿಕಾರಿದ್ದಾರೆ. ಡಿ.ಕೆ. ಸುರೇಶ್ ಚುನಾವಣೆ ನಡೆಸದಂತೆ ಅವರನ್ನು ಕಟ್ಟಿಹಾಕಲು ಈ ರೀತಿ ಹುನ್ನಾರ ನಡೆಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

Related Articles

Back to top button