ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರಣಾಂತಿಕ ಕೊರೋನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮಗಳ ಜೊತೆಗೆ ಕೇಂದ್ರ ಸರ್ಕಾರ ತುರ್ತಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೊರೋನಾ ಬಗ್ಗೆ ಜನ ಭಯಭೀತರಾಗಿದ್ದಾರೆ. ಇಲ್ಲಿಯವರೆಗೆ ಹೊರದೇಶದಿಂದ ಬಂದಿರೋರಿಗೆ ಮಾತ್ರ ಕೊರೋನಾ ಬಂದಿದೆ. ಸ್ಥಳೀಯರಿಂದ ಕೊರೋನಾ ಬಂದಿಲ್ಲ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರೆ ಸಾಲದು. ಅದಕ್ಕೆ ತಕ್ಕದಾಗಿ ಮುಂಜಾಗ್ರತೆ, ಸುರಕ್ಷತಾ ಕ್ರಮ ತಗೋಬೇಕು ಎಂದರು.
ಕೊರೋನಾಗಾಗಿಯೇ ಕೇಂದ್ರ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಬೇಕು. ರಾಜ್ಯಗಳಿಗೆ ಹಣಕಾಸು ನೆರವು ನೀಡಬೇಕು. ಆದರೆ, ಕೊರೋನಾ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಕೇಂದ್ರ ಸರ್ಕಾರದ ನಾಯಕರು ಕೊರೋನಾ ತಡೆಯುವ ಬದಲು ಬರೀ ಭಾಷಣ ಬಿಗಿಯುತ್ತಿದ್ದಾರೆ ಎಂದು ಕಿಡಿಕಾರಿದರು.
ಕೊರೋನಾ ವೈರಸ್ಗೆ ವಿಶ್ವದಾದ್ಯಂತ ಈವರೆಗೆ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಭಾರತದಲ್ಲೂ ಇಬ್ಬರು ಸಾವನ್ನಪ್ಪಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ