ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ರದ್ದಾಗಿಲ್ಲ, ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಕಾರಣಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಕೆಲವು ಸುದ್ದಿಗಳು ಹರಡುತ್ತಿದೆ. ಅದರೆ ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ ಎಂದಿದ್ದಾರೆ.
ಕೊರೊನಾ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೆ ಪಿಯುಸಿಯ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಆದರೆ ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ