Latest

ಗಂಟಲು ದ್ರವ ಪರೀಕ್ಷೆಗೆ ಕೊಟ್ಟವರಿಗೆ ಕ್ವಾರಂಟೈನ್ ಕಡ್ಡಾಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಂಟಲು ದ್ರವ ಪರೀಕ್ಷೆಗೆ ಕೊಟ್ಟ ವ್ಯಕ್ತಿ ಐಸೋಲೇಷನ್ ಅಥವಾ ಮನೆಯಲ್ಲೇ ಕ್ವಾರಂಟೈನಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.

ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹೊಸ ಆದೇಶ ನೀಡಿದೆ. ಕೋವಿಡ್-19 ಪರೀಕ್ಷೆಯ ವರದಿ ಬರುವವರೆಗೂ ಹೋಂ ಐಸೋಲೇಷನ್‍ನಲ್ಲಿರುವುದು ಕಡ್ಡಾಯ ಮಾಡಲಾಗಿದೆ. ನಿಯಮಗಳನ್ನು ಮೀರಿ ಸ್ವ್ಯಾಬ್ ಟೆಸ್ಟ್ ಕೊಟ್ಟವರು ಸಾರ್ವಜನಿಕವಾಗಿ ಓಡಾಡುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದು ಕಂಡು ಬಂದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.

Home add -Advt

ಶಂಕಿತ ವ್ಯಕ್ತಿಗಳನ್ನು ಗುರುತಿಸಿ ಅಧಿಕಾರಿಗಳೇ ಸಾಕಷ್ಟು ಮಂದಿಯ ಸ್ವ್ಯಾಬ್ ಟೆಸ್ಟ್ ಮಾಡಿಸಿರುತ್ತಾರೆ. ಆದರೆ ಆ ಬಳಿಕ ವ್ಯಕ್ತಿಯನ್ನು ಯಾವುದೇ ಸೂಚನೆ ನೀಡದೆ ಮನೆಗೆ ಕಳುಹಿಸಿದ್ದ ಸಾಕಷ್ಟು ಪ್ರಕರಣಗಳು ವರದಿಯಾಗಿದ್ದವು. ಅಲ್ಲದೇ ಸ್ವ್ಯಾಬ್ ಟೆಸ್ಟ್ ಕೊಟ್ಟ ವ್ಯಕ್ತಿ ಮನೆಗೆ ಬಂದ ಬಳಿಕ ಹಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದ ಈ ಹಿನ್ನಲೆಯಲ್ಲಿ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.

Related Articles

Back to top button