ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ತುಮಕೂರು ಮೂಲದ ವಿದ್ಯಾರ್ಥಿಯೊಬ್ಬ ಭಾರತಕ್ಕೆ ಬರುವ ಸಂದರ್ಭದಲ್ಲಿ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹಿನ್ನಲೆಯಲ್ಲಿ ಚೀನಾದಲ್ಲೇ ಉಳಿಯಾಲು ನಿರ್ಧರಿಸಿದ್ದಾರೆ.
ತುಮಕೂರಿನ ಶಿಕ್ಷಕ ಹೊಸಕೆರೆ ರಿಜ್ವಾನ್ ಭಾಷಾ ಅವರ ಕಿರಿಯ ಪುತ್ರ ಸಾಹಿಲ್ ಹುಸೇನ್ ಕಳೆದ ಮೂರು ವರ್ಷಗಳಿಂದ ಚೀನಾದ ವಾನ್ಲಿ ಜಿಲ್ಲೆಯಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿನ ನಾಚಂಗ್ ಸಿಟಿಯ ‘ಜಿಯಾಂಗ್ಸಿ ಯೂನಿವರ್ಸಿಟಿ ಆಫ್ ಟ್ರಡಿಷನಲ್ ಅಂಡ್ ಚೈನೀಸ್ ಮೆಡಿಸಿನ್ಸ್’ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅವರು 3ನೇ ವರ್ಷದ ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದಾನೆ .
ಸಾಹಿಲ್ ಹುಸೇನ್ ಗೆ ಯಾವುದೇ ರೀತಿಯ ವೈರಸ್ ಇಲ್ಲ. ಆದರೆ, ಭಾರತಕ್ಕೆ ಬರುವ ಸಂದರ್ಭದಲ್ಲಿ ವೈರಸ್ ತಗುಲಬಹುದು ಎಂಬ ಆತಂಕದಿಂದ ವಾಪಸ್ ಬರಲು ಹಿಂದೇಟು ಹಾಕುತ್ತಿದ್ದಾನೆ.
ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ. ಹೀಗಾಗಿ ಚೀನಾದಲ್ಲೇ ಇರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾನೆ. ಈ ಕುರಿತಂತೆ ತನ್ನ ಪೋಷಕರಿಗೂ ಕೂಡ ಮಾಹಿತಿಯನ್ನು ತಿಳಿಸಿದ್ದಾರೆ.
ಚೀನಾದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ದೊರೆಯುತ್ತಿದೆ. ಪ್ರತಿನಿತ್ಯ ಎರಡು ಮಾಸ್ಕ್ ಮತ್ತು 1 ಥರ್ಮೋ ಮೀಟರ್ ಅನ್ನು ಕೊಡಲಾಗುತ್ತಿದೆ ಎಂದು ಹೇಳಿದ್ದಾರೆ. ಈಗಾಗಲೇ 300 ಕ್ಕೂ ಹೆಚ್ಚು ಭಾರತೀಯ ಮೂಲದ ವಿದ್ಯಾರ್ಥಿಗಳು ಕೊರೋನಾ ವೈರಸ್ ಭೀತಿಯಿಂದ ವಾಪಸ್ ಭಾರತಕ್ಕೆ ಮರಳಿದ್ದಾರೆ. ಆದರೆ ಈಗ ಉಳಿದಿರುವ 10 ಮಂದಿಯಲ್ಲಿ ಯಾರಿಗೂ ಕೂಡ ಕೊರೋನಾ ಸೋಂಕು ಇಲ್ಲ ಎಂದು ಹೇಳಿದ್ದಾರೆ ಎಂದು ಸಾಹಿಲ್ ತಿಳಿಸಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ