ಪ್ರಗತಿವಾಹಿನಿ ಸುದ್ದಿ; ತುಮಕೂರು: ಮಾರಣಾಂತಿಕ ಕರೊನಾ ವೈರಸ್ ರಾಜ್ಯದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ. ತುಮಕೂರಿನಾ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಈ ಕುರಿತು ತುಮಕೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 10:45ಕ್ಕೆ 65 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಅಸುನೀಗಿದ್ದಾರೆ ಎಂದು ತಿಳಿಸಿದ್ದಾರೆ.
ಮೃತ ವ್ಯಕ್ತಿಯು ಶಿರಾ ಮೂಲದವರಾಗಿದ್ದು ಮಾರ್ಚ್ 11ರಂದು ದೆಹಲಿಯಿಂದ ಯಶವಂತಪುರಕ್ಕೆ ರೈಲಿನಲ್ಲಿ ಬಂದಿದ್ದರೆನ್ನಲಾಗಿದೆ. ದೆಹಲಿಯ ಜಾಮಿಯಾ ಮಸೀದಿಯಲ್ಲಿ ನಡೆದ ಸಭೆಯಲ್ಲೂ ಇವರು ಭಾಗಿಯಾಗಿದ್ದರು.
ಇವರ ಕುಟುಂಬದಲ್ಲಿ ಒಟ್ಟು 25 ಮಂದಿ ಇದ್ದಾರೆ. ಅವರೆಲ್ಲರನ್ನೂ ಐಸೋಲೇಶನ್ನಲ್ಲಿ ಇಡಲಾಗಿದೆ. ಹಾಗೆಯೇ ಈ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ 33 ಮಂದಿಯ ಸ್ಯಾಂಪಲ್ಗಳನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ.
ಇದು ಕೊರೊನಾಗೆ ತುಮಕೂರಿನಲ್ಲಿ ಮೊದಲ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಮೂವರು ಸಾವನ್ನಪ್ಪಿದಂತಾಗಿದೆ. ದೇಶಾದ್ಯಂತ ಕೊರೋನಾದಿಂದ ಸತ್ತವರ ಸಂಖ್ಯೆ 18ಕ್ಕೆ ಏರಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 700 ದಾಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ