ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ವ್ಯಾಕ್ಸಿನ್ ಗೆ ಡಿಮ್ಯಾಂಡ್ ಹೆಚ್ಚುತ್ತಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಎದುರಾಗಿದ್ದು, ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಮೊದಲ ಡೋಸ್ ವ್ಯಾಕ್ಸಿನ್ ಪಡೆದ ಜನರು ಎರಡನೇ ಡೋಸ್ ಗಾಗಿ ಲಸಿಕಾ ಕೇಂದ್ರಗಳಿಗೆ ಆಗಮಿಸಿದ್ದು, ರಾಜ್ಯದ ಲಸಿಕಾ ಕೇಂದ್ರಗಳ ಎದುರು ಮುಂಜಾನೆಯಿಂದ ಸರತಿಸಾಲಿನಲ್ಲಿ ನಿಂತಿದ್ದಾರೆ. ಆದರೆ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಇಲ್ಲ ಎಂದು ವಾಪಸ್ ಕಳುಹಿಸಲಾಗುತ್ತಿದೆ. ರಾಜ್ಯಾದ್ಯಂತ ವ್ಯಾಕ್ಸಿನ್ ಗಾಗಿ ಹಾಹಾಕಾರ ಆರಂಭವಾಗಿದೆ.
ರಾಜಧಾನಿ ಬೆಂಗಳೂರು, ಮೈಸೂರು, ಧುಬ್ಬಳ್ಳಿ-ಧಾರವಾಡ, ಬೀದರ್, ಕಲಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ನೋ ಸ್ಟಾಕ್ ಎಂಬ ಬೋರ್ಡ್ ಹಾಕಲಾಗಿದೆ. ಹಲವೆಡೆಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ಲಭ್ಯವಿಲ್ಲ, ಕೋವಿಶೀಲ್ಡ್ 2ನೇ ಡೋಸ್ ಮಾತ್ರ ಲಭ್ಯವಿದೆ ಎಂದು ಲಸಿಕಾ ಕೇಂದ್ರದ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಆಖ್ಸಿಜನ್ ಕೊರತೆ ಜೊತೆಗೆ ಇದೀಗ ಕೊರೊನಾ ಸಂಜೀವಿನಿ ವ್ಯಾಕ್ಸಿನ್ ಕೊರತೆ ಕೂಡ ಆರಂಭವಾಗಿದೆ.
ಪೆಟ್ರೋಲ್-ಡೀಸೆಲ್ ದರದಲ್ಲಿ ಭಾರೀ ಏರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ