ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕಾಗಿ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಲಾಗಿದೆ.

ವಿಜಯಪುರ ಜಿಲ್ಲಾಡಳಿತ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಸುಮಾರು 150ಕ್ಕೂ ಹೆಚ್ಚು ರೋಗಿಗಳನ್ನು ನಗರದ ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಜನರಲ್ ವಾರ್ಡ್, ಡಯಾಲಿಸಿಸ್ ವಾರ್ಡ್​​ ಸೇರಿದಂತೆ ನಾನಾ ವಾರ್ಡ್​​ಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ವಿಜಯಪುರ ಕೋವಿಡ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗಿದೆ.

ಇನ್ನು, ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು ಹಲವು ಬಡಾವಣೆಗಳನ್ನು ಲಾಕಡೌನ್ ಮಾಡಿದ್ದಾರೆ. ಈ ಬಡಾವಣೆಗಳಿಗೆ ಯಾರೂ ಹೋಗುವಂತಿಲ್ಲ, ಯಾರೂ ಬರುವಂತಿಲ್ಲ ಎಂದು ಸೂಚಿಸಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button