ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತೊಂದು ಬಲಿ ಪಡೆದುಕೊಂಡಿದ್ದು, ವಿಜಯಪುರದಲ್ಲಿ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ವಿಜಯಪುರದ 69 ವರ್ಷದ ವ್ಯಕ್ತಿ ಭಾನುವಾರ ಮೃತಪಟ್ಟಿದ್ದರು. ಪತ್ನಿಗೆ ಕೊರೊನಾ ಬಂದಿದ್ದ ಹಿನ್ನೆಲೆಯಲ್ಲಿ ಕ್ವಾರಂಟೈನ್‍ನಲ್ಲಿ ಇಡಲಾಗಿತ್ತು. ಈಗ ಪರೀಕ್ಷಾ ವರದಿ ಪ್ರಕಟವಾಗಿದ್ದು ಕೊರೊನಾದಿಂದ ಮೃತಪಟ್ಟಿರುವುದು ದೃಢವಾಗಿದೆ. ರಾಜ್ಯದಲ್ಲಿ ಕೇವಲ 2 ದಿನಗಳ ಅಂತರದಲ್ಲಿ ಕೊರೊನ ಅಸೋಂಕಿಗೆ ಮೂವರು ಮೃತಪಟ್ಟಿದ್ದಾರೆ.

Home add -Advt

ಇನ್ನು ಇಂದು ಒಂದೇ ದಿನ 11 ಹೊಸ ಕೊರೊನಾ ಪ್ರಕರಣ ರಾಜ್ಯದಲ್ಲಿ ಪತ್ತೆಯಾಗಿದೆ. ಬಾಗಲಕೋಟೆ, ಕಲಬುರಗಿಯ ಮೂವರು, ಬೆಂಗಳೂರಿನ ಇಬ್ಬರು, ಚಿಕ್ಕಬಳ್ಳಾಪುರ, ಬಾಗಲಕೋಟೆ, ವಿಜಯಪುರದ, ಬೆಳಗಾವಿ ತಲಾ ಒಬ್ಬರಿಗೆ ಸೋಂಕು ಬಂದಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.

Related Articles

Back to top button