Election NewsLatest

ವಿಕಾಸಸೌಧಕ್ಕೂ ಕಾಲಿಟ್ಟ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಕಾಸಸೌಧಕ್ಕೂ ಕೊರೊನಾ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ವಿಕಾಸಸೌಧ ಕಟ್ಟಡವನ್ನು ಸೀಲ್‌ಡೌನ್ ಮಾಡಲಾಗಿದೆ.

ವಿಕಾಸಸೌಧದ ಆಹಾರ ಇಲಾಖೆ ಮಹಿಳಾ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟೀವ್ ಬಂದಿದ್ದು, ಇಡೀ ವಿಕಾಸಸೌಧ ಹಾಗೂ ಶಕ್ತಿಸೌಧದ ಸಿಬ್ಬಂದಿಗಳು ಕೊರೋನಾ ಆತಂಕಕ್ಕೆ ಒಳಗಾಗಿದ್ದಾರೆ. ವಿಕಾಸಸೌಧದ ಮೊದಲ ಮಹಡಿಯಲ್ಲಿ ಮಹಿಳೆ ಕೆಲಸಮಾಡುತ್ತಿದ್ದರು.

ಈ ಹಿನ್ನಲೆಯಲ್ಲಿ ವಿಕಾಸಸೌಧದ ಆಹಾರ ಇಲಾಖೆ ಕೊಠಡಿ ಸೇರಿದಂತೆ ಅಕ್ಕಪಕ್ಕದ ಐದು ಕೊಠಡಿಗಳನ್ನು ಸೀಲ್ ಡೌನ್ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗಳನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚಿಸಲಾಗಿದೆ.

ವಿಕಾಸಸೌಧದ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟೀವ್ ಕಂಡುಬಂದ ಹಿನ್ನಲೆಯಲ್ಲಿ ಇದೀಗ ವಿಧಾನಸೌಧಕ್ಕೂಕೊರೋನಾ ಭೀತಿ ಎದುರಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button