
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಶ್ವದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ವೈರಸ್ ಗೆ 185 ರಾಷ್ಟ್ರಗಳು ತತ್ತರಿಸಿ ಹೋಗಿವೆ. ಈವರೆಗೆ ಸೋಂಕಿಗೆ 11,399 ಮಂದಿ ಬಲಿಯಾಗಿದ್ದಾರೆ. 2.75 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಭಾರತದಲ್ಲಿ ಸೋಂಕಿತರ ಸಂಖ್ಯೆ 249ಕ್ಕೆ ಏರಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ.
ವಿಶ್ವಾದ್ಯಂತ ಸುಮಾರು 91,912 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,72,642 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಈವರೆಗೆ 249 ಮಂದಿ ತುತ್ತಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 221 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 5 ಮಂದಿ ಸಾವನ್ನಪ್ಪಿದ್ದಾರೆ.
ಕರ್ನಾಟಕದಲ್ಲಿ 15 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ. ಕೇರಳದ ಕಾಸರಗೋಡಿನಲ್ಲಿ 5 ಹೊಸ ಶಂಕಿತ ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಸೋಂಕಿತರ ಸಂಖ್ಯೆ 5 ಪಟ್ಟು ಹೆಚ್ಚಳವಾಗಿದೆ.
ಇನ್ನು ದೇಶದಲ್ಲಿ 55 ಹೊಸ ಪ್ರಕರಣ ದಾಖಲಾಗಿದೆ. ಇಟಲಿಯಲ್ಲಿ 5,986, ಸ್ಪೇನ್‍ನಲ್ಲಿ 3,494, ಜರ್ಮನಿಯಲ್ಲಿ 4,528, ಅಮೆರಿಕದಕಲ್ಲಿ 5,861, ಇರಾನ್‍ನಲ್ಲಿ 1,237, ಫ್ರಾನ್ಸ್ ನಲ್ಲಿ 1,617 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಇಟಲಿಯಲ್ಲಿ ಕಳೆದ 24 ಗಂಟೆಯಲ್ಲಿ 627 ಮಂದಿ ಸಾವನ್ನಪ್ಪಿದ್ದಾರೆ. ಚೀನಾದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 81,008 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 71,740 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,255 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 6,013 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಯುಎಸ್‍ಎನಲ್ಲಿ ಕೊರೊನಾಗೆ 263 ಮಂದಿ ಬಲಿಯಾಗಿದ್ದಾರೆ. 147 ಮಂದಿ ಗುಣಮುಖರಾಗಿದ್ದು, ಸದ್ಯ 19,240 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ