Latest

*ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ.

ಬೈಕ್ ನಲ್ಲಿ ಜಮೀನಿಗೆ ತೆರಳುತ್ತಿದ್ದ ಇಬ್ಬರು ರೈತರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಗೇಂದ್ರ (45) ಹಾಗೂ ಮಲ್ಲೇಶ್ (48) ಮೃತ ದುರ್ದೈವಿಗಳು. ರೈತರಿಬ್ಬರೂ ಬೈಕ್ ನಲ್ಲಿ ತೆರಳುತ್ತಿದಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ತಗುಲಿ, ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Related Articles

Back to top button