ಕೊರೊನಾ ಸೋಂಕಿಗೆ ಗದಗದಲ್ಲಿ ಮತ್ತೊಂದು ಬಲಿ

ಪ್ರಗತಿವಾಹಿನಿ ಸುದ್ದಿ; ಗದಗ: ಮಾರಣಾಂತಿಕ ಕೊರೊನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಈ ಸೋಂಕಿಗೆ ರಾಜ್ಯದಲ್ಲಿ 6ನೇ ಬಲಿಯಾಗಿದೆ. ಕೋರೊನಾ ಸೋಂಕಿನಿಂದ ಗದಗ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ.

Home add -Advt

ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ ಸೇರಿ ಒಟ್ಟು 6 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗದಗ ನಗರದಲ್ಲಿ ಕಟ್ಟು ನಿಟ್ಟಿನ ಲಾಕ್ ಡೌನ್ ಮುಂದುವರೆಸಲಾಗಿದೆ.

Related Articles

Back to top button