ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 14ರ ಬಳಿಕವೂ ಲಾಕ್‍ಡೌನ್ ಮುಂದುವರೆಸಲು ಸರ್ಕಾರ ಮುಂದಾಗಿದೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ದಿನಗಳ ಕಾಲ ಸಾರಿಗೆ ಸಂಚಾರ ಬಂದ್ ಮಾಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.
21 ದಿನಗಳ ಲಾಕ್ ಡೌನ್ ಮುಗಿದರೂ ಬರೋಬ್ಬರಿ ಒಂದು ತಿಂಗಳ ಕಾಲ ಸಾರಿಗೆ ಸೇವೆ ಬಂದ್ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ. ಹೀಗಾಗಿ ಒಂದು ತಿಂಗಳು ಕಾಲ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಯಾವುದೂ ಇರುವುದಿಲ್ಲ ಎಂದು ಹೇಳಲಾಗುತ್ತಿದೆ.
ಇನ್ನೂ ಆಟೋ, ಕ್ಯಾಬ್‍ಗಳ ಓಡಾಟಕ್ಕೂ ಸರ್ಕಾರ ಬ್ರೇಕ್ ಹಾಕುವುದಕ್ಕೆ ಚಿಂತನೆ ನಡೆಸಿದೆ. ತಜ್ಞರ ಮಾಹಿತಿ ಅನುಸಾರ ಸರ್ಕಾರದಿಂದ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಆದರೆ ಜನ ಓಡಾಡುವುದಕ್ಕೆ ಸಡಿಲಿಕೆ ಮಾಡಲು ಚಿಂತನೆ ನಡೆಸಿದೆ. ಜೊತೆಗೆ ಖಾಸಗಿಯಾಗಿ ವಾಹನ ಓಡಿಸಲು ಕೂಡ ಅವಕಾಶ ಮಾಡಿಕೊಡಲಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ