Latest

ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಶಾಲೆಗಳಲ್ಲಿನ ಪರಿಸರ ಸ್ವಚ್ಛವಾಗಿಡುವುದು ಹಾಗೂ ಇಂಥ ಸ್ವಚ್ಛತಾ ಕಾರ್ಯಗಳಿಗೆ ಅಭಿನಂದನೆ ತಿಳಿಸಿ ಪ್ರಶಸ್ತಿ ನೀಡುವುದು ಸಂತೋಷದ ಸಂಗತಿಯಾಗಿದೆ ಹಾಗೂ ಮಕ್ಕಳಲ್ಲಿ ಸ್ವಚ್ಛತೆಯ ಜ್ಞಾನವನ್ನು ತುಂಬಿ ಪ್ರೋತ್ಸಾಹಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಅನಿಲ ಬೆನಕೆ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿ ಪ್ರಾದೇಶಿಕ ಕಚೇರಿ, ಚಿಕ್ಕೋಡಿ ಪ್ರಾದೇಶಿಕ ಕಚೇರಿ, ರಾಜ್ಯ ವಿಜ್ಞಾನ ಪರಿಷತ್ತು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ, ಡಾ. ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರ, ಸ್ಟೆಪ್ ಗೋಕಾಕ ಹಾಗೂ ಪರಿಸರ ಮಿತ್ರ ಸಂಘ ಬೆಳಗಾವಿ ಇವುಗಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ಶಾಲೆಯ ಆವರಣದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು ಶಿಕ್ಷಕರ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಕರ್ತವ್ಯವಾಗಿದೆ. ಎಲ್ಲ ಶಾಲೆಗಳನ್ನು ಪರಿಸರ ಸ್ನೇಹಿ ಶಾಲೆಗಳನ್ನಾಗಿಸಲು ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರಿಸರ ಮಿತ್ರ ಸಂಘದ ಸದಸ್ಯರು, ಪ್ರಶಸ್ತಿ ಪಡೆದ ಆಯಾ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Related Articles

Back to top button