ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವಾರಿಯರ್ಸ್ ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ಕೊರೊನಾ ವಾರಿಯರ್ಸ್ ವೈದ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ.
ಕೊರೊನಾ ವಾರಿಯರ್ಸ್ ಆಗಿದ್ದ ನಂಜನಗೂಡಿನ ಆರೋಗ್ಯಾಧಿಕಾರಿ ನಾಗೇಂದ್ರ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲಸದ ಒತ್ತಡದಿಂದಾಗಿ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನಾಗೇಂದ್ರ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷನ ಸಚಿವ ಸುಧಾಕರ್, ಮೈಸೂರಿನ ನಂಜನಗೂಡು ತಾಲೂಕು ಕೋವಿಡ್ ವಾರಿಯರ್ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್ ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರ್ಕಾರ ಯಾವತ್ತೂ ಜೊತೆಗಿದೆ ಎಂದು ಮನವಿ ಮಾಡಿದ್ದಾರೆ.
ಆರೋಗ್ಯಾಧಿಕಾರಿ ಆತ್ಮಹತ್ಯೆ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ, ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ