Latest

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ: ನಾಳೆ ತುರ್ತು ಸಭೆ ಕರೆದ ಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮತ್ತೆ ಕೊರೋನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತುರ್ತು ಸಭೆ ಕರೆದಿದ್ದಾರೆ.

ಸಂಬಂಧಿಸಿದ ಸಚಿವರು, ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು. ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರಕಾರವೂ  ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

 

ಸುಧಾಕರ ಮಾಹಿತಿ:

 

ಕರ್ನಾಟಕದಲ್ಲಿಯೂ ಕೋವಿಡ್ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ (ಡಿ.22)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಈಗಾಗಲೇ ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಚೀನಾ, ಜಪಾನ್, ಅಮೆರಿಕ, ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ಭಾರತದಲ್ಲಿಯೂ ಕಟ್ಟೆಚ್ಚರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರ ಕಟ್ಟೆಚ್ಚರಕ್ಕೆ ಸೂಚಿಸಿದ್ದು, ರಾಜ್ಯದಲ್ಲಿಯೂ ಅಲರ್ಟ್ ಆಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. 3ನೇ ಡೋಸ್ ಲಸಿಕೆ ಹಾಕಿಸಿಕೊಳ್ಳದವರು ತಕ್ಷಣ ಲಸಿಕೆ ಪಡೆದುಕೊಳ್ಳಿ. ಮಕ್ಕಳಿಗೂ ಲಸಿಕೆ ಅಗತ್ಯವಿದೆ ಎಂದು ಹೇಳಿದರು.

ವಿಮಾನ ನಿಲ್ದಾಣ, ಜನದಟ್ಟಣೆ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಪ್ರಮುಖವಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಮುಂಜಾಗೃತ ಅಗತ್ಯವಿದೆ. ಕ್ರಿಸ್ ಮಸ್, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಕೋವಿಡ್ ಮಾರ್ಗಸೂಚಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಲಾಗುವುದು. ಜನರು ಆರೋಗ್ಯದ ಬಗ್ಗೆ ಜಾಗೃತೆ ವಹಿಸುವುದು ಮುಖ್ಯ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ. ಈಗಾಗಲೇ ಕೋವಿಡ್ ಸಲಹಾ ಸಮಿತಿಗೆ ಬಿಬಿಎಂಪಿ ಮನವಿ ಮಾಡಿದೆ.

ಹೊಸ ವರ್ಷದಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಹಾಗೂ ವಿದೇಶಗಳಿಂದ ನಗರಕ್ಕೆ ಜನರು ಬರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಮಾಸ್ಕ್ ಧರಿಸಲು ಸೂಚಿಸುವಂತೆ ಹಾಗೂ ಮಾರ್ಕೆಟ್, ಮಾಲ್, ಥಿಯೇಟರ್, ಮೆಟ್ರೋ, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆ  ಕರೆಯಲಾಗಿದೆ ಎಂದು ತಿಳಿಸಿದರು.

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ವಿಧಾನ ಸರಳೀಕರಣ

https://pragati.taskdun.com/simplification-of-procedure-for-conversion-of-agricultural-land-for-non-agricultural-purposes/

ರಸ್ತೆ ಅಪಘಾತ ತಡೆಯಲು ರಸ್ತೆ ಸುರಕ್ಷತಾ ನಿಯಂತ್ರಣ ಪ್ರಾಧಿಕಾರ ರಚನೆ 

https://pragati.taskdun.com/establishment-of-road-safety-regulatory-authority-to-prevent-road-accidents/

ಆಟೋ, ಕ್ಯಾಬ್ ಚಾಲಕರಿಗೆ ಆಯುಷ್ಮಾನ್ ಭಾರತ್ ಅಡಿ ಉಚಿತ ಚಿಕಿತ್ಸೆ 

https://pragati.taskdun.com/free-treatment-under-ayushman-bharat-for-auto-and-cab-drivers/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button