ಭಟ್ಕಳಕ್ಕೂ ಕಾಲಿಟ್ಟ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆಅರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತಾರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರತ್ಯೇಕ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಯುವಕ ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿ ಒಟ್ಟು 162 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಪ್ರಯಾಣಿಕರನ್ನೂ ಸಂಪರ್ಕಿಸಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

Home add -Advt

Related Articles

Back to top button