ಸಿಬಿಎಸ್​ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಸಿಬಿಎಸ್​ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳನ್ನು ಮುಂದೂಡಿದೆ.

ಸೆಂಟ್ರಲ್ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಷನ್​(ಸಿಬಿಎಸ್​ಇ) 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್​​ 31ರವರೆಗೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಭಾರತ ಮತ್ತು ವಿದೇಶಗಳಲ್ಲಿ ನಡೆಯಲಿರುವ ಎಲ್ಲಾ ಸಿಬಿಎಸ್​ಇ ಪರೀಕ್ಷೆಗಳನ್ನು ಮಾರ್ಚ್​​ 31ರವರೆಗೆ ಮುಂದೂಡಲಾಗಿದೆ. ಪರಿಸ್ಥಿತಿ ನೋಡಿ ಮುಂದಿನ ದಿನಾಂಕವನ್ನು ನಿಗದಿ ಪಡಿಸಲಾಗುವುದು ಎಂದು ಸಿಬಿಎಸ್​ಇ ಬೋರ್ಡ್​ ಕಾರ್ಯದರ್ಶಿ ಅನುರಾಗ್​ ತ್ರಿಪತಿ ತಿಳಿಸಿದ್ದಾರೆ. ಮೌಲ್ಯಮಾಪನ ಕಾರ್ಯವನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದರು.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ಮೇರೆಗೆ ಸಿಬಿಎಸ್​ಇ ಈ ಕ್ರಮ ಕೈಗೊಂಡಿದೆ. ಕೊರೋನಾ ಭೀತಿ ಹಿನ್ನೆಲೆ, ಎಚ್​ಆರ್​​​ಡಿ ಸಚಿವಾಲಯವು ದೇಶದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಪರೀಕ್ಷೆಗಳನ್ನು ಮಾರ್ಚ್​​ 31ರವರೆಗೆ ಮುಂದೂಡುವಂತೆ ಆದೇಶಿಸಿದೆ.

ಆದರೆ ಐಸಿಎಸ್​ಇ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಮೊದಲಿನ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ ಎಂದು ಐಸಿಎಸ್​ಇ ಬೋರ್ಡ್​​ನ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಗೆರ್ರಿ ಆರಥಾನ್​ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button