
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಮತ್ತೊಂದು ಮಹಾಸ್ಫೋಟ ಸಂಭವಿಸಿದೆ. ಇಂದು ಒಟ್ಟೂ 1267 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲೇ 783 ಜನರಿಗೆ ಸೊಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡದಲ್ಲಿ 97, ಬಳ್ಳಾರಿಯಲ್ಲಿ 71, ಉಡುಪಿಯಲ್ಲಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.
ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 13,190ಕ್ಕೇರಿದೆ. ಇಂದು ಒಟ್ಟೂ 16 ಜನರು ಸಾವಿಗೀಡಾಗಿದ್ದಾರೆ. ಈವರೆಗೆ ರಾಜ್ಯದಲ್ಲಿ 207 ಜನರು ಸಾವಿಗೀಡಾಗಿದ್ದಾರೆ.