Kannada NewsKarnataka NewsNational

*ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರನಾಥ್‌ ಇನ್ನಿಲ್ಲ*

ಪ್ರಗತಿವಾಹಿನಿ‌ ಸುದ್ದಿ: ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರನಾಥ್‌ (93) ಅವರು ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Home add -Advt

ಮೈಸೂರಿನ ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ ರಾಜೀವ್ ತಾರಾನಾಥ್ ತಿಂಗಳ ಹಿಂದೆ ಕುಸಿದು ಬಿದ್ದಿದ್ದರು. ಇದರಿಂದ ಅವರ ತೊಡೆಯ ಮೂಳೆ ಮುರಿದಿದ್ದು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು. ಆದರೆ ನಿನ್ನೆ ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ. 

ಕುವೆಂಪುನಗರದ ನಿವಾಸದಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ರಾಜೀವ್ ತಾರಾನಾಥ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

ಅಪರೂಪದ ಪ್ರತಿಭೆಯ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದು ಸಿಎಂ ಸಿದ್ದರಾಮಯ್ಯ ಇದು ಸಂಗೀತಲೋಕಕ್ಕೆ ತುಂಬಲಾರದ ನಷ್ಟವೆಂದಿದ್ದಾರೆ. 

Related Articles

Back to top button