Kannada NewsKarnataka NewsLatest
ಎಸ್ಪಿ ಲಕ್ಷ್ಣಣ ನಿಂಬರಿಗಿಗೂ ಕೊರೋನಾ ದೃಢ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಗ ಸ್ವಲ್ಪ ಹೊತ್ತಿನ ಮೊದಲು ಅವರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಹಾಗಾಗಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ.
ಇಂದು ಬೆಳಗ್ಗೆ ನಡೆದ ಸ್ವಾತಂತರ್ಯ ದಿನಾಚರಣೆಯಲ್ಲೂ ಅವರು ಪಾಲ್ಗೊಂಡಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರಡ್ಡಿ ಎಸ್ಪಿಯವರ ಹೊಣೆಯನ್ನು ನಿಭಾಯಿಸಲಿದ್ದಾರೆ.




