ಪ್ರಗತಿವಾಹಿನಿ ಸುದ್ದಿ, ಕಾರವಾರ : ಕೊರೆನಾ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯಲ್ಲಾಪುರದ ಮದರ ಥೆರಸಾ ಪ್ರೌಢ ಶಾಲೆ, ದಾಂಡೇಲಿಯ ಎಸ್ ಎಚ್ ಸೂರಗಾವಿ ಇಂಟರ್ ನ್ಯಾಷನಲ್ ಸ್ಕೂಲ್, ಬಿ ಸಿ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ, ಹಾಗೂ ಕಿರಿಯ ಪ್ರಾಥಮಿಕ ಶಾಲೆ ಆಡಿಟ್ ನಂ ೨ ಮತ್ತು ಜನತಾ ವಿದ್ಯಾಲಯ ಪ್ರೌಢ ಶಾಲೆ, ಶಿರಸಿಯ ಮಾರಿಕಾಂಬಾ ಪ್ರೌಢ ಶಾಲೆ, ಹೊನ್ನಾವರದ ಹೊಲಿರೋಸರಿ ಕಾನ್ವೆಂಟ್ ಪ್ರೌಢ ಶಾಲೆ, ಇಡಗುಂಜಿಯ ಸರ್ಕಾರಿ ಪ್ರೌಢ ಶಾಲೆ, ಹೊದ್ಕೆಶಿರೂರನ ಸರ್ಕಾರಿ ಪ್ರೌಢ ಶಾಲೆ, ಕುಮಟಾ ತಾಲೂಕಿನ ಸಂತೆಗುಳಿ ಕರ್ನಾಟಕ ಪಬ್ಲಿಕ್ ಪ್ರೌಢ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಜ. ೧೯ ರ ಕೋವಿಡ್ ಪರೀಕ್ಷಾ ವರದಿಯಂತೆ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್-೧೯ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜ. ೨೫ ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ