ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಸಡಿಲಗೊಳ್ಳುತ್ತಿರುವ ಬೆನ್ನಲ್ಲೇ ಕೊರೊನಾ ಸೋಂಕು ಕೂಡ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 3,900 ಹೊಸ ಪ್ರಕರಣ ಪತ್ತೆಯಾಗಿದೆ. 24 ಗಂಟೆಯಲ್ಲಿ ಭಾರತದಲ್ಲಿ 195 ಜನರು ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 46,433ಕ್ಕೆ ಏರಿದೆ. ಒಟ್ಟು ಪ್ರಕರಣಗಳಲ್ಲಿ 32,134 ಸಕ್ರಿಯ ಪ್ರಕರಣಗಳಿದ್ದು, 12,727 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 1568 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.
ಉಳಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಜಕ್ಕೂ ನಿಯಂತ್ರಣದಲ್ಲಿದೆ ಎನ್ನಲಾಗಿತ್ತು. ಆದರೆ ಒಂದೇ ದಿನದಲ್ಲಿ ಬರೋಬ್ಬರಿ 195 ಮಂದಿ ಕೊರೊನಾಗೆ ಬಲಿಯಾಗಿದ್ದು, 3,900 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿರುವುದನ್ನು ನೋಡಿದರೆ ಭಾರತದಲ್ಲಿ ಸೋಂಕು ಕಾಣಿಸಿಕೊಂಡ ನಂತರ ದಿನವೊಂದರಲ್ಲಿ ಇಷ್ಟೊಂದು ಪ್ರಕರಣ ದಾಖಲಾಗಿದ್ದು ಇದೇ ಮೊದಲು.ಇದು ಹೀಗೆ ಮುಂದುವರೆದರೆ ದೇಶದಲ್ಲಿ ಕೊರೊನಾ ಕೈಮೀರುವ ಎಲ್ಲಾ ಸಾಧ್ಯತೆಯಿದೆ ಎಂಬ ಆತಂಕ ಎದುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ