ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾರಣಾಂತಿಕ ಕೊರೊನಾ ವೈರಸ್ ಗೆ ದೇಶದಲ್ಲಿ ನಾಲ್ಕನೇ ಬಲಿಯಾಗಿದೆ. ಪಂಜಾಬ್ ನಲ್ಲಿ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಈ ವರೆಗೂ 167 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಂಜಾಬ್ ನಲ್ಲಿ ಸೋಂಕಿತರ ಸಂಖ್ಯೆ 2ಕ್ಕೇರಿದ್ದು, ಇಂದು ಮೊದಲ ಸಾವು ಸಂಭವಿಸಿದೆ.
ಸೋಂಕಿತ ವ್ಯಕ್ತಿ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡೀಗಢದಲ್ಲೂ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ.
ಈಗಾಗಾಲೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಎರಿಕೆಯಾಗಿದ್ದು ಕಲಬುರಗಿಯಲ್ಲಿ ಓರ್ವ ಸಾವನ್ನಪ್ಪಿದ್ದರು. ದೆಹಲಿಯಲ್ಲಿ ಓರ್ವ, ಮಹಾರಾಷ್ಟ್ರದಲ್ಲಿ ಓರ್ವ ಮಹಿಳೆ ಹಾಗೂ ಈಗ ಪಂಜಾಬ್ ನಲ್ಲಿ ಓರ್ವ ಸೇರಿ ದೇಶದಲ್ಲಿ ಇದುವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ