ಕೊರೊನಾ ವೈರಸ್: ದೇಶದಲ್ಲಿ 28 ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್,ಭಾರತದಲ್ಲಿ ಈವರೆಗೆ 28 ಮಂದಿಗೆ ಕೊರೋನಾ ವೈರಸ್ ಸೋಂಕು ಪ್ರಕಾರಣ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದ್ದು, ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಈವರೆಗೂ 28 ಜನರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಇವರಲ್ಲಿ 14 ವಿದೇಶೀ ಪ್ರವಾಸಿಗರೂ ಒಳಗೊಂಡಿದ್ದಾರೆ. ಸೋಂಕು ತಗುಲಿರುವವರ ಪೈಕಿ ಮೂವರು ಚೇತರಿಸಿಕೊಂಡಿದ್ದಾರೆ ಎಂದರು.

ವೈರಸ್ ಸೋಂಕು ಹೆಚ್ಚಾಗುತ್ತಿರುವುದರಿಂದ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನೂ ತಪಾಸಣೆಗೆ ಒಳಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈವರೆಗೆ ವೈರಸ್ ಸೋಂಕು ಇದ್ದ 12 ದೇಶಗಳಿಂದ ಬರುವ ಜನರನ್ನಷ್ಟೇ ತಪಾಸಣೆಗೆ ಒಳಪಡಿಸಲಾಗುತ್ತಿತ್ತು. ಈಗ ಯಾವುದೇ ದೇಶದಿಂದ ಬರುವ ಪ್ರತಿಯೊಬ್ಬರನ್ನೂ ಕೊರೋನಾ ವೈರಸ್ ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button