ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಮೂಲದ ಟೆಕ್ಕಿ ಸಂದೀಪ್ ಗೆ ಕೊರೊನಾ ವೈರಸ್ ಇಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.
ಹುಬ್ಬಳ್ಳಿ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಸಂದೀಪ್ ಇತ್ತೀಚೆಗೆ ಚೀನಾದಿಂದ ವಾಪಸ್ ಆಗಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಕೊರೊನಾ ವೈರಸ್ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಸಂದೀಪ್ ರಕ್ತದ ಮಾದರಿಯನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ರಕ್ತದ ಮಾದರಿಯ ವರದಿ ಬಂದಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಸಂದೀಪ್ ಗೆ ಕೊರೊನಾ ಭೀತಿ ಇಲ್ಲ. ಅಲ್ಲದೇ ಹುಬ್ಬಳ್ಳಿಯ ಜನತೆ ಕೂಡ ಕೊರೋನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲವೆಂದು ಕಿಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರದ ಸಂದೀಪ್ ಚೀನಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ಹುಬ್ಬಳ್ಳಿಗೆ ವಾಪಸ್ ಆಗಿದ್ದರು. ಸೋಮವಾರ ಅವರು ಜ್ವರದಿಂದ ಬಳಲಿದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನಲೆಯಲ್ಲಿ ಅವರಲ್ಲಿ ಕೊರೊನಾ ವೈರಸ್ ಸೋಂಕು ಇರಬಹುದೆಂದು ಶಂಕಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ