Kannada NewsKarnataka NewsLatest

*ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ನಾಮನಿರ್ದೇಶನಗೊಂಡ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಮುಕ್ತಾಯಗೊಂಡ/ ಮುಕ್ತಾಯಗೊಳ್ಳಲಿರುವ ಅವಧಿ ವಿಸ್ತರಣೆಗೆ ಆದೇಶ ಹೊರಡಿಸಲಾಗಿದೆ.

ಮುಂದಿನ ಆದೇಶದವರೆಗೆ ಮುಂದುವರೆಸಿ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

Home add -Advt

Related Articles

Back to top button