Film & Entertainment

*ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಮಹಿಳೆಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿ ಮಹಿಳೆ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

ಮಧ್ಯಾಹ್ನ 1:30ರ ವೇಳೆ ನಾಗಶೇಖರ್ ಅವರ ಬೆಂಜ್ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮರಕ್ಕೆ ಗುದ್ದಿದೆ ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ನಿರ್ದೇಶಕನ ಕಾರು ವಶಕ್ಕೆ ಪಡೆದಿದ್ದಾರೆ.

Home add -Advt

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ನಾಗಶೇಖರ್, ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣುಚ್ಚಿದೆ. ಹಾಗಾಗಿ ಆಕ್ಸಿಡೆಂಟ್ ಆಯಿತು. ಮಹಿಳೆಯೊಬ್ಬರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ಮಹಿಳೆಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನ ಅವಘಡ ಸಂಭವಿಸಿಲ್ಲ. ಕಾರಿಗೆ ಡ್ಯಾಮೇಜ್ ಆಗಿದೆ. ಇನ್ನು ನನಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.

ನಾಗಶೇಖರ್, ಕನ್ನಡದ ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

Related Articles

Back to top button