ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಕೇಳಿ ಬಂದಿದ್ದ ಎರಡು ಭ್ರಷ್ಟಾಚಾರ ಹಗರಣಗಳ ಕುರಿತು ತನಿಖೆ ನಡೆಸಲು ಪ್ರಸ್ತುತ ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ್ದ ಶೇ.40ರ ಕನಮಿಷನ್ ಹಗರಣ ತನಿಖೆಗೆ ಕರ್ನಾಟಕ ಉಚ್ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್. ನಾಗಮೋಹನದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿದೆ.
ಹಾಗೆಯೇ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಔಷಧಿ ಹಾಗೂ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಹಾಗೂ ಇತರೆ ವಿಷಯಗಳ ಕುರಿತು 2021ರ ಜುಲೈ, ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಹಿನ್ನೆಲೆಯಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ನಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದೆ.
ಎರಡೂ ಸಮಿತಿಗಳಿಗೆ 3 ತಿಂಗಳ ಕಾಲಾವಕಾಶ ನಿಗದಿಪಡಿಸಲಾಗಿದೆ.
ಅಧಿಸೂಚನೆ -1
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷರಾದ ಡಿ.ಕಂಪಣ್ಣ ಇವರು ಮಾನ್ಯ ಪ್ರಧಾನ ಮಂತ್ರಿಗಳಿಗೆ ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಯತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ, ಇತ್ಯಾದಿಗಳಲ್ಲಿ 40%ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ, ಭ್ರಷ್ಟಾಚಾರ ನಡೆಯುತ್ತಿರುವುದಾಗಿ ವಿವರಿಸಿದ್ದರು. ಈ ಮನವಿಗಳಲ್ಲಿ ಪ್ರಮುಖವಾಗಿ ಕಾಮಗಾರಿಗಳನ್ನು ಪ್ರಾರಂಭಿಸುವ ಪೂರ್ವದಲ್ಲಿಯೇ 25% ರಿಂದ 30%ರವರೆಗೆ ಕೆಲವು ಸಾರ್ವಜನಿಕ ಪ್ರತಿನಿಧಿಗಳಿಗೆ ಮತ್ತು ಇತರರಿಗೆ ಲಂಚ ನೀಡಬೇಕಾದ ಸ್ಥಿತಿಯ ಬಗ್ಗೆ ಕಾಮಗಾರಿಗಳು ಪೂರ್ಣವಾದ ನಂತರ ಬಾಕಿ ಬಿಲ್ಲುಗಳನ್ನು ತೀರುವಳಿ ಮಾಡಲು 5% ರಿಂದ 6% ರವರೆಗೆ ಎಲ್.ಓ.ಸಿ. ಬಿಡುಗಡೆಗೆ: ಹೊರ ರಾಜ್ಯದ ಗುತ್ತಿಗೆದಾರರಿಗೆ ಪ್ಯಾಕೇಜ್, ಪದ್ಮತಿಯಿಂದ ಅನುಕೂಲ ಮಾಡಲಾಗುತ್ತಿರುವ ಬಗ್ಗೆ ಹಾಗೂ ಪ್ರಮುಖವಾಗಿ 40%ರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ, ಸಾಧ್ಯಂತವಾಗಿ ವಿವರಿಸಿದರು.
ಆದರೆ, ಇದುವರೆವಿಗೂ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿರುವುದಿಲ್ಲ.
ಈ ಹಿನ್ನೆಲೆಯಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿ ನಡೆಸುವ ಇಲಾಖೆಗಳಾದ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ದತಿ, ಪುನರ್ ಅಂದಾಜು (Revised Estimate), ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ದೂರುದಾರರಾದ ಶ್ರೀ ಡಿ.ಕೆಂಪಣ್ಣ, ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಇವರ ಆರೋಪದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ತನಿಖೆಯ ಅಗತ್ಯವಿರುವುದನ್ನು ಮನಗಂಡು Commissions of Inquiry Act 1952 ರ ನಿಯಮ 3ರ ಉಪ ನಿಯಮ 1ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ತನಿಖಾ ಸಮಿತಿ ರಚಿಸಿ ಆದೇಶಿಸಿದ್ದ ಸರ್ಕಾರದ ಆದೇಶ ಸಂಖ್ಯೆ: ಲೋಇ 526 ಸಿಆರ್‌ಎಂ 2023, ದಿನಾಂಕ: 17.08.2023ನ್ನು ರದ್ದುಪಡಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್ ಕಂಟ್ಯಾಕ್ಟರ್ ಅಸೋಸಿಯೇಷನ್, ಬೆಂಗಳೂರು ಇವರು ಸಲ್ಲಿಸಿರುವ ಮನವಿಯಲ್ಲಿನ ಆರೋಪಗಳ ಕುರಿತು ತನಿಖೆಯನ್ನು ನಡೆಸಲು barbados Commissions of Inquiry Act 1952 (Central Act LX of 1952) Ja 3ರ ಉಪ ನಿಯಮ 1ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿದೆ.
ಮಾನ್ಯ ಆಯೋಗದ ತನಿಖಾ ವ್ಯಾಪ್ತಿಗೆ (Terms of Referrence) ವಹಿಸಲಾಗಿರುವ ಅಂಶಗಳು ಈ ಕೆಳಕಂಡಂತಿರುತ್ತದೆ.
1) ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಾದ ಲೋಕೋಪಯೋಗ ಇಲಾಖೆ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ಟೆಂಡರ್ ಪ್ರಕ್ರಿಯ ಪ್ಯಾಕೇಜ್ ಪದ್ಮತಿ, ಪುನ ಅಂದಾಜು (Revised Estimate), ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸ್ಥಳ ಹಾಗೂ ದಾಖಲಾತಿಗಳ ಪರಿಶೀಲನೆಯೊಂದಿಗೆ ವಿವರವಾದ ತನಿಖೆಯನ್ನು ನಡೆಸಿ, ಲೋಪ-ದೋಷಗಳ ಮಾಹಿತಿ ಹಾಗೂ ತತ್ಸಂಬಂಧಿತ ಆರೋಪಿತರ ಸ್ಪಷ್ಟ ಗುರುತಿಸುವಿಕೆಯ ಸಹಿತ ಪರಿಪೂರ್ಣ ತನಿಖೆಯನ್ನು ನಡೆಸುವುದು.
2) ಮಾನ್ಯ ಆಯೋಗವು ಮಲಿನ ಕಾರ್ಯ ವ್ಯಾಪ್ತಿಯ ಜೊತೆಗೆ ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಇವರ ಮನವಿಗಳು / ದೂರು ಅರ್ಜಿಗಳಲ್ಲಿನ ಎಲ್ಲಾ ಅಂಶಗಳನ್ನೂ ಸಹ ಸವಿವರವಾಗಿ ತನಿಖಾ ವ್ಯಾಪ್ತಿಯಲ್ಲಿ ಪರಿಶೀಲಿಸಲು ಸೂಚಿಸಿದ. 3) ಅಲ್ಲದ, ತನಿಖೆಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕೆಳಕಂಡ ಅಂಶಗಳನ್ನೂ ಸಹ ಪರಾಮರ್ಶಿಸುವುದು
1. ಯೋಜನೆ/ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ನೀಡಿರುವ ಬಗ್ಗೆ…
1. ಅನುಷ್ಠಾನಗೊಳಿಸಲಾದ ಕಾಮಗಾರಿ ಯೋಜನೆಗಳ ಗುಣಮಟ್ಟ ಕಾಮಗಾರಿಗಳ ಅಂದಾಜುಗಳನ್ನು ನಿಯಮಗಳ ಪ್ರಚಲಿತ ಅನುಸೂಚಿ ದರಗಳ ಅನುಸಾರವಾಗಿ ತಯಾರಿಸಿರುವ ಬಗ್ಗೆ…
iv. ಕಾಮಗಾರಿಗಳ ಅಂದಾಜಿನಲ್ಲಿನ ಪರಿಮಾಣ (Quantity) ವಾಸ್ತವಿಕವಾಗಿದೆಯೇ ಅಥವಾ ಕೃತಕವಾಗಿ ಹೆಚ್ಚಿಸಲಾಗಿದೆಯೇ? ಹೆಚ್ಚಿಸಿದಲ್ಲಿ, ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆಯ ಜೊತೆಗೆ ಯಾವ ಹಂತದಲ್ಲಿ ಹೆಚ್ಚಿಸಲಾಗಿದೆ ಎಂಬುದನ್ನು ಪರೀಕ್ಷಿಸುವುದು.
ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ (Variation) ಅನಿವಾರ್ಯತೆ ಮತ್ತು ಅಗತ್ಯತೆ, ಅನಿವಾರ್ಯವಾಗಿದ್ದಲ್ಲಿ, ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣಗಳು ಹಾಗೂ ಇವುಗಳಿಗೆ ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿರುವ ಬಗ್ಗೆ. i. ಯಾವುದಾದರೂ ಕಾಮಗಾರಿಗಳನ್ನು ನಿರ್ವಹಿಸದೆಯೇ ಬಿಲ್ಲು ಪಾವತಿ ಮಾಡಲಾಗಿದೆಯೇ ಅಥವಾ ಅನುಷ್ಟಾನವಾದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಬಿಲ್ಲು ಪಾವತಿಸಲಾಗಿದೆಯೇ? ಈ ಕಾಮಗಾರಿಗಳ ಟೆಂಡರ್‌ಗಳನ್ನು ಕರೆಯುವಾಗ ಕೆಲವೇ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಹಾಗೂ ಉಳಿದ ಗುತ್ತಿಗೆದಾರರು.. ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ರೂಪಿಸಲಾಗಿತ್ತೇ ಎಂಬ
ಅಂಶಗಳ ಬಗ್ಗೆ.
III. ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಸಾಮಗ್ರಿಗಳು, ಉಪಕರಣಗಳು ಇತ್ಯಾದಿಗಳ ಗುಣಮಟ್ಟ, ಪರೀಕ್ಷೆಯನ್ನು ನಿರ್ದಿಷ್ಟ ಪಡಿಸಿ ಅಧಿಕೃತ ಏಜೆನ್ಸಿಗಳಿಂದ ಮಾಡಿಸಲಾಗಿದೆಯೇ? ಒಟ್ಟಾರ ಕಾಮಗಾರಿಗಳ ಕುರಿತಾದ ಟೆಂಡರ್ ಪ್ರಕ್ರಿಯೆ ಮತ್ತು ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರೆ ಯಾವುದಾದರೂ ಲೋಪ- ದೋಷಗಳು, • ಪರಿಶೀಲನೆಯ ಸಂದರ್ಭದಲ್ಲಿ ಆಯೋಗದ ಗಮನಕ್ಕೆ ಬರುವ ಇನ್ನಾವುದೇ ಗಂಭೀರ ವಿಷಯಗಳನ್ನು ವಿಚಾರಣಾ ಆಯೋಗವು ಪರಾಮರ್ಶಿಸುವುದು,
ಮೇಲ್ಕಂಡ ಅಂಶಗಳ ಕುರಿತು ವಿಚಾರಣಾ ಆಯೋಗವು Commissions of Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ. ಹಾಗೂ ತನಿಖೆಯನ್ನು 03 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದೊಂದು ಸರ್ಕಾರವು ಆಪೇಕ್ಷಿಸುತ್ತದೆ. ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ / ದಾಖಲೆಗಳನ್ನು ಒದಗಿಸಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು / ಆರ್ಥಿಕ ಸಲಹೆಗಾರರು / ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಸಹಕರಿಸತಕ್ಕದ್ದು.
ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು / ದಾಖಲಾತಿಗಳು / ವಹಿಗಳು ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ಸ್ಥಳ ತನಿಖೆ ಸಂದರ್ಭದಲ್ಲಿ ಖುದ್ದು ಹಾಜರಿದ್ದು, ವಿಚಾರಣಾ, ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.
ವಿಚಾರಣಾ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಅಗತ್ಯ ಸಲಕರಣೆಗಳನ್ನು ಒದಗಿಸತಕ್ಕದ್ದು. ಆಯೋಗಕ್ಕೆ ಭತ್ಯೆ ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದು,
ಸದರಿ ವಿಚಾರಣಾ ಆಯೋಗಕ್ಕೆ ಅಗತ್ಯವಿದ್ದಲ್ಲಿ, ಅಧ್ಯಕ್ಷರ ಕೋರಿಕೆಯ ಮೇರೆಗೆ ಗುಣಮಟ್ಟ ಪರೀಕ್ಷೆಗೆ ನೋಂದಾಯಿತ 3ನೇ ಸ್ವತಂತ್ರ ಸಂಸ್ಥೆಯ (ಡಿ Party Assistance) ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸುವುದು.
ಆಯೋಗವು ಬೆಂಗಳೂರು ಕೇಂದ್ರ ಧ್ಯಾನದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕಛೇರಿಗೆ ಸ್ಥಳಾವಕಾಶ ಮಾನ್ಯ ಆಯೋಗದ ಮಾನ್ಯ ನ್ಯಾಯಾಧೀಶರಿಗೆ ಆಯೋಗದ ಕಾರ್ಯದರ್ಶಿಯವರಿಗೆ ಹಾಗೂ ಅಧಿಕಾರಿ / ಸಿಬ್ಬಂದಿಗಳಿಗೆ ವಾಹನಗಳು, ಪೀಠೋಪಕರಣಗಳು, ದೂರವಾಣಿ ವ್ಯವಸ್ಥೆ, ಸ್ವಾದಿ ಸೌಲಭ್ಯಗಳನ್ನು ಒದಗಿಸಲು ಲೋಕೋಪಯೋಗಿ ಇಲಾಖೆಯು ಕ್ರಮ ವಹಿಸತಕ್ಕದ್ದು
(ರಾಜಶೇಖರ ಎಂ.ಜಿ.) ಸರ್ಕಾರದ ಅಧೀನ ಕಾರ್ಯದರ್ಶಿ
ಒಳಾಡಳಿತ ಇಲಾಖೆ ಕಾನೂನು ಮತ್ತು ಸುವ್ಯವಸ್ತೆ)
——————————-
ಕರ್ನಾಟಕ ಸರ್ಕಾರದ ಸಚಿವಾಲಯ, ವಿಧಾನ ಸೌಧ ಬೆಂಗಳೂರು, ದಿನಾಂಕ:25,08,2023
ಅಧಿಸೂಚನೆ -2
1. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಔಷಧಿ ಹಾಗೂ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಹಾಗೂ ಇತರೆ ವಿಷಯಗಳ ಕುರಿತು 2021ರ ಜುಲೈ, ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ಚರ್ಚಿಸಿದ ಈ ಪ್ರಕರಣದಲ್ಲಿ ತನಿಖೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act 1952 ರ ನಿಯಮ ತರ ಉಪ ನಿಯಮ 1ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
2. ಈ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ, ಔಷಧಿ, ಉವಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ, ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ನಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದೆ.
3. 2021 ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಕುರಿತು ವಿಚಾರಣಾ ಆಯೋಗವು Commissions of Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ. ಹಾಗೂ ತನಿಖೆಯನ್ನು 03 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಆಪೇಕ್ಷಿಸುತ್ತದೆ. ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ / ದಾಖಲೆಗಳನ್ನು ಒದಗಿಸಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ವೈದ್ಯರು/ತಾಂತ್ರಿಕ ಸಲಹೆಗಾರರು / ಆರ್ಥಿಕ ಸಲಹೆಗಾರರು 1 ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಸಹಕರಿಸತಕ್ಕದ್ದು.
4. ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ, ತನಿಖೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು / ದಾಖಲಾತಿಗಳು / ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ಸ್ಥಳ ತನಿಖೆ ಸಂದರ್ಭದಲ್ಲಿ ಖುದ್ದು ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.
5. ವಿಚಾರಣಾ ಆಯೋಗಕ್ಕೆ, ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಅಗತ್ಯ ಸಲಕರಣೆಗಳನ್ನು ಒದಗಿಸತಕ್ಕದ್ದು. ಆಯೋಗಕ್ಕೆ, ಭತ್ಯೆ, ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದು.
6. ಸದರಿ ವಿಚಾರಣಾ ಆಯೋಗಕ್ಕೆ ಅಗತ್ಯವಿದ್ದಲ್ಲಿ, ಅಧ್ಯಕ್ಷರ ಕೋರಿಕೆಯ ಮೇರೆಗೆ ಗುಣಮಟ್ಟ ಪರೀಕ್ಷೆಗೆ ನೋಂದಾಯಿತ 3ನೇ ಸ್ವತಂತ್ರ ಸಂಸ್ಥೆಯ (3″ Party Assistance). ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸುವುದು,
7. ಆಯೋಗವು ಬೆಂಗಳೂರು ಕೇಂದ್ರ ಸ್ನಾನದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕಛೇರಿಗೆ ಸ್ಥಳಾವಕಾಶ ಮಾನ ಆಯೋಗದ ಮಾನ್ಯ ನ್ಯಾಯಾಧೀಶರಿಗೆ, ಆಯೋಗದ ಕಾರ್ಯದರ್ಶಿಯವರಿಗೆ ಹಾಗೂ ಅಧಿಕಾರಿ / ಸಿಬ್ಬಂದಿಗಳಿಗೆ ವಾಹನಗಳು, ಪೀಠೋಪಕರಣಗಳು, ದೂರವಾಣಿ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಆಯುಕ್ತರು, ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ಕ್ರಮ ಕೈಗೊಳ್ಳತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ (ರಾಜಶೇಖರ ಎಂ.ಜಿ)
ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ(ಕಾನೂನು ಮತ್ತು ಸುವ್ಯವಸ್ಥೆ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ