*ಕಾಂಗ್ರೆಸ್ಸಿನ ಡಿಎನ್‌ಎಯಲ್ಲೇ ಭ್ರಷ್ಟಾಚಾರವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ಸಿನ ಡಿಎನ್‌ಎಯಲ್ಲೇ ಭ್ರಷ್ಟಾಚಾರವಿದ್ದು, ಹಾಸುಹೊಕ್ಕಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು. ಆದರೆ, ವಾಜಪೇಯಿ, ನರೇಂದ್ರ ಮೋದಿಯವರ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಇಂದು ಕೆಂಗೇರಿಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಪಾದಯಾತ್ರೆ ಕಾರ್ಯಕ್ರಮ ಉದ್ಘಾಟನೆಯ ಬಳಿಕ ಮಾತನಾಡಿ, ನಾವು ನಿಲುವಳಿ ಸೂಚನೆ ಮೂಲಕ ಮುಡಾ ಹಗರಣದ ವಿವರ ಕೇಳಿದ್ದೆವು. ಮುಡಾದಲ್ಲಿ 3ರಿಂದ 4 ಸಾವಿರ ಕೋಟಿಯ ಹಗರಣ ಆಗಿದೆ ಎಂದು ಅವರ ಪಕ್ಷದವರೇ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಗುಡುಗಿದ್ದಾರೆ. ವಿಪಕ್ಷದ ಹೋರಾಟದ ಹಕ್ಕನ್ನು ಮುಂದಿಟ್ಟು ನಾವು ಪಾದಯಾತ್ರೆ ಮಾಡುತ್ತಿದ್ದೇವೆ.
ದಲಿತ ವ್ಯಕ್ತಿಯ ಜಮೀನು ನುಂಗಿದ್ದಾರೆ. ಸಿದ್ದರಾಮಯ್ಯನವರು ತಪ್ಪು ಮಾಡದೇ ಇದ್ದರೆ ಅವರ್ಯಾಕೆ ರಾಜ್ಯಪಾಲರನ್ನು ಪ್ರಶ್ನಿಸುತ್ತಿದ್ದಾರೆ ಎಂದು ಅಶೋಕ್ ಆಕ್ಷೇಪಿಸಿದ್ದಾರೆ. ಒಂದು ನೋಟಿಸ್ ಗೇ ಕಾಂಗ್ರೆಸ್ಸಿಗರು ಗಡಗಡ ನಡುಗುತ್ತಿದ್ದಾರೆ ಎಂದು ತಿವಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ