ಕ್ಯಾಂಡಿ ಮಾರಾಟ, ಬಳಕೆ ಮಾಡಿದ್ರೆ ಕಾನೂನು ಕ್ರಮ; ಸಚಿವ ದಿನೇಶ್ ಗುಂಡೂರಾವ್
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇನ್ಮುಂದೆ ಕಾಟನ್ ಕ್ಯಾಂಡಿ ಮಾರಾಟ ಮಾಡುವಂತಿಲ್ಲ. ಅಪಾಯಕಾರಿ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಅಪಾಯಕಾರಿ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಕಾಟನ್ ಕ್ಯಾಂಡಿ ಬಳಕೆ, ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೋಬಿ, ಕಾಅನ್ ಕ್ಯಾಂಡಿಯಲ್ಲಿ ೨ ಕೆಮಿಕಲ್ ಇರುವುದು ಪತ್ತೆಯಾಗಿದೆ. ಇವುಗಳಲ್ಲಿ ರೋಡೋ ಮೈನ್ ಬಿ ಎಂಬ ಕೃತಕ ಬಣ್ಣ ಬಳಸಲಾಗುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ ಹಾಗೂ ರೊಡೋ ಮೈನ್ ನಿಂದ ಕ್ಯಾನ್ಸರ್ ನಂತಹ ರೋಗಕ್ಕೆ ಕಾರಣವಾಗುತ್ತದೆ. ಮಕ್ಕಳು ಗೋಬಿ, ಕಾಟನ್ ಕ್ಯಾಂಡಿ ಸೇವನೆ ಮಡ್ತಾರೆ. ಹಾಗಾಗಿ ಅಪಾಯಕಾರಿ ಕಾಟನ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದರು.
ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ತಯಾರಿಸುವಾಗ ಯಾವುದೇ ಕೃತಕ ಬಣ್ಣ ಬಳಸುವಂತಿಲ್ಲ. ಕಲರ್ ಕಟನ್ ಕ್ಯಾಂಡಿಯಲ್ಲಿ ಅಪಾಯಕಾಅರಿ ಅಂಶವಿರುವುದರಿಂದ ರಾಜ್ಯದಲ್ಲಿ ಕಲರ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ