Election NewsKannada NewsKarnataka NewsPolitics

*ರಾಜ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ: ಆರ್. ಅಶೋಕ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಾ ಆಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೊಸ ಬಾಂಬ್ ಸಿಡಿಸಿದ್ದಾರೆ. 

Home add -Advt

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತಿರುವ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ. ಕಾಂಗ್ರೆಸ್ ಸರ್ಕಾರ ಕುಸಿಯಲು ಸಜ್ಜಾಗಿದೆ. ಸರ್ಕಾರಗಳನ್ನು ಬೀಳಿಸುವುದು ಅಸಾಧ್ಯ ಎಂದು ಹಲವರು ಹೇಳಿಕೊಂಡಿದ್ದರು. ಆದರೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮತ್ತು ಈ ಹಿಂದೆ ಕರ್ನಾಟಕದಲ್ಲಿ ಏನಾಯಿತು? ಅದು ಸಾಧ್ಯ ಎಂಬುದನ್ನು ನಾವು ಸಾಬೀತುಪಡಿಸಿದ್ದೇವೆ ಎಂದರು.

ಕಾಂಗ್ರೆಸ್ ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಶೋಕ್, ಬಿಜೆಪಿ ಜತೆ ಸಂಪರ್ಕದಲ್ಲಿರುವ ಕಾರಣ ಕಾಂಗ್ರೆಸ್ ಸರ್ಕಾರದ ಪತನದ ಮುನ್ಸೂಚನೆ ನೀಡುತ್ತಿದ್ದೇವೆ. ಅವರಲ್ಲಿ ಕೆಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ರಾಜ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗದಿದ್ದರೆ ಸರ್ಕಾರ ಪತನವಾಗಲಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೆ ಮಂಡ್ಯದಲ್ಲಿ ಹೇಳಿದ್ದಾರೆ. ಬಿಜೆಪಿ ಶಾಸಕರಿಗೆ 30 ರಿಂದ 50 ಕೋಟಿ ರೂಪಾಯಿ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಆರೋಪಿಸಿದ್ದರು. ಅವರು ಸರ್ಕಾರ ಪತನದ ಭವಿಷ್ಯವನ್ನು ಮಾತ್ರ ಹೇಳುತ್ತಿದ್ದಾರೆ. ಅಭಿವೃದ್ಧಿಗೆ ಒಂದು ಪೈಸೆಯೂ ಬಿಡುಗಡೆಯಾಗದ ಕಾರಣ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ಮೇಲೆ ಬೇಸರಗೊಂಡಿದ್ದಾರೆ ಎಂದು ಅಶೋಕ್ ಹೇಳಿದರು.

Related Articles

Back to top button