Kannada NewsKarnataka NewsLatest

ಲೋಕಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಉಪಚುನಾವಣೆ ಸೇರಿದಂತೆ ಕಳೆದ ತಿಂಗಳು ನಡೆದಿರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಅನೇಕ ಉಪಚುನಾವಣೆಗಳ ಮತ ಎಣಿಕೆ ಭಾನುವಾರ ನಡೆಯಲಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದೆ. ಕರ್ನಾಟಕದ 2 ವಿಧಾನಸಭೆ ಉಪಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಉಪಚುನಾವಣೆ ನಡೆದಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದ ಕೇಂದ್ರದ ಮಾಜಿ ಸಚಿವ ಸುರೇಶ ಅಂಗಡಿ ಪತ್ನಿ ಮಂಗಲಾ ಅಂಗಡಿ ಸ್ಪರ್ಧಿಸಿದ್ದಾರೆ. ಮತದಾನ ಪ್ರಮಾಣ ಕಡಿಮೆಯಾಗಿರುವುದರಿಂದ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಲೆಕ್ಕ ಹಾಕುತ್ತಿದ್ದರೆ, ಎಗ್ಸಿಟ್ ಪೋಲ್ ಗಳು ಸಮಬಲದ ಹೊರಾಟ ಅಥವಾ ಅಲ್ಪ ಅಂತರದಿಂದ ಬಿಜೆಪಿ ಗೆಲುವಿನ ಸುಳಿವು ನೀಡಿವೆ.

ಭಾನುವಾರ ಬೆಳಗ್ಗೆ ಮತ ಎಣಿಕೆ ಆರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ. ಸಂಜೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಬಹುದು.

ಬೆಡ್ ಲಭ್ಯತೆಯೂ ಸೇರಿ ಬೆಳಗಾವಿ ಜಿಲ್ಲೆಯ ಸಮಗ್ರ ಕೊರೋನಾ ಮಾಹಿತಿ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button