ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ: ಬಹಿರಂಗ ಪ್ರಚಾರಕ್ಕೆ ತೆರೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಬಹಿರಂಗ ಪ್ರಚಾರಕ್ಕೆ ನಿನ್ನೆ ಕೊನೆಯ ದಿನ ಆಗಿದ್ದರಿಂದ ಕಾಂಗ್ರೆಸ್ ಬಿಜೆಪಿ ಪಕ್ಷಗಳ ಘಟಾನುಘಟಿ ನಾಯಕರು ತಡರಾತ್ರಿವರೆಗೂ ಸಮಾವೇಶ, ರೋಡ್ ಶೋ ಮಾಡುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಪರ ರೋಡ್ ಶೋ ನಡೆಸಿದರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣದಲ್ಲಿ ಸಮಾವೇಶ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ಪ್ರಧಾನಿ ಮೋದಿ ಅವರು ಮಂಗಳೂರು, ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಿದರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಮಂಡ್ಯದಲ್ಲಿ ಮಾತ್ರ ಬಹಿರಂಗ ಸಮಾವೇಶ ನಡೆಸಿದರು. ಇಂದು ಚುನಾವಣಾ ಅಖಾಡದಲ್ಲಿರುವ ಅಭ್ಯರ್ಥಿಗಳು ಮನೆಮನೆ ಪ್ರಚಾರ ನಡೆಸಬಹುದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ