Latest

ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ, ಕೊಲೆ, ದಂಪತಿ ಬಂಧನ; ಮನಕಲಕುವ ಘಟನೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಪ್ರಾಪ್ತ ಬಾಲಕಿ ಮೇಲೆ ತಂದೆಯೇ ಅತ್ಯಾಚಾರವೆಸಗಿ ಕೊಲೆ ಮಾಡಿ ಶವದೊಂದಿಗೆ ಪರಾರಿಯಾಗುತ್ತಿದ್ದ ದಂಪತಿಯನ್ನು ಸೋಲಾಪುರ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬದಿದೆ.

ರಾಜಸ್ಥಾನಕ್ಕೆ ತೆರಳುತ್ತಿದ್ದ ದಂಪತಿಯನ್ನು ಸಿಕಂದರಾಬಾದ್ ರಾಜ್ ಕೋಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲು ಹೊರಟಾಗಿನಿಂದ ಬಾಲಕಿ ನಿದ್ರೆಗೆ ಜಾರಿದ್ದಳು. 6 ಗಂಟೆಗೂ ಹೆಚ್ಚುಕಾಲವಾದರೂ ಮಿಸುಕಾಡದ ಬಾಲಕಿ ಸ್ಥಿತಿಕಂಡು ಅನುಮಾನಗೊಂಡ ಸಹಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲಿಸರು ದಂಪತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಬಹಿರಂಗವಾಗಿದೆ.

Home add -Advt

ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದು, ಕೊಲೆ ಮುಚ್ಚಿಹಾಕಲು ಆರೋಪಿ ತನ್ನ ಪತ್ನಿ ಹಾಗೂ ಮಗನಿಗೆ ಬೆದರಿಕೆಯೊಡ್ಡಿ ಹೈದರಾಬಾದ್ ನಿಂದ ರಾಜಸ್ಥಾನದಲ್ಲಿದ್ದ ತನ್ನ ಸ್ವ ಗ್ರಾಮಕ್ಕೆ ಬಲವಂತವಾಗಿ ಕರೆದೊಯ್ಯುತ್ತಿದ್ದ. ಪ್ರಕರಣವನ್ನು ಹೈದರಾಬಾದ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವದಾಸಿ ಪದ್ಧತಿ ನಿವಾರಣೆಗೆ ಪಣ ತೊಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

Related Articles

Back to top button