
ಪ್ರಗತಿವಾಹಿನಿ ಸುದ್ದಿ: ನೆರೆಯ ರಾಜ್ಯ ತೆಲಂಗಾಣದಲ್ಲಿ ಘನಘೋರ ದುರಂತವೊಂದು ಸಂಭವಿಸಿದ್ದು ಇಬ್ಬರು ಮಕ್ಕಳನ್ನು ಕೊಂದು ದಂಪತಿ ಸೂಸೈಡ್ ಮಾಡಿಕೊಂಡಿದ್ದಾರೆ.
ಉಸ್ಮಾನಿಯಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಈ ದುರಂತ ಘಟನೆ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ್ದಾರೆ.
ನಾಗರಕುರ್ನೂಲ್ ಜಿಲ್ಲೆಯ ಕಲ್ವಕುರ್ತಿ ಮಂಡಲದ ಮೊಕುರಲ್‌ನ ಚಂದ್ರಶೇಖರ್ ರೆಡ್ಡಿ (40) ಮತ್ತು ಕವಿತಾ ರೆಡ್ಡಿ (35) ಮಕ್ಕಳಾದ ಶ್ರೀತಾ ರೆಡ್ಡಿ (13) ಮತ್ತು ವಿಶ್ವಂತ್ ರೆಡ್ಡಿ (10) ಮೃತ ದುರ್ದೈವಿಗಳಾಗಿದ್ದಾರೆ.
ಕಳೆದ ಆರು ತಿಂಗಳಿನಿಂದ ಕೆಲಸವಿಲ್ಲದ ಕಾರಣ ಕುಟುಂಬವು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಹೀಗಾಗಿ ಸೂಸೈಡ್ ನಿರ್ಧಾರ ಮಾಡಿದ್ದು, ಇಡೀ ಕುಟುಂಬ ಸಾವಿಗೆ ಶರಣಾಗಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ